ದಿಯೋಘರ್, ಜು. 29 (DaijiworldNews/AA): ಜಾರ್ಖಂಡ್ನ ದಿಯೋಘರ್ ಜಿಲ್ಲೆಯಲ್ಲಿ ಸಿಲಿಂಡರ್ ತುಂಬಿದ ಬಸ್ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ 19 ಮಂದಿ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಸೋಮವಾರ ಬೆಳಿಗ್ಗೆ 4:30ರ ಸುಮಾರಿಗೆ ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್ ಗ್ಯಾಸ್ ಸಿಲಿಂಡರ್ ತುಂಬಿದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 19 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಗಿಸಲಾಗಿದೆ ಎಂದು ವರದಿಯಾಗಿದೆ.
"ಅಡುಗೆ ಅನಿಲ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಟ್ರಕ್ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಿಂದ ಈ ಅಪಘಾತ ಸಂಭವಿಸಿದೆ. ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಪೊಲೀಸರ ತಂಡ ಹಾಗೂ ತುರ್ತು ಸೇವೆಗಳು ಅಪಘಾತದ ಸ್ಥಳದಲ್ಲಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿದವು" ಎಂದು ದುಮ್ಕಾ ವಲಯದ ಪೊಲೀಸ್ ಅಧಿಕಾರಿ ಶೈಲೇಂದ್ರ ಕುಮಾರ್ ಸಿನ್ಹಾ ತಿಳಿಸಿದ್ದಾರೆ.
"ನನ್ನ ಲೋಕಸಭಾ ಕ್ಷೇತ್ರವಾದ ದಿಯೋಘರ್ನಲ್ಲಿ ಶ್ರಾವಣ ಮಾಸದ ಕನ್ವಾರಾ ಯಾತ್ರೆಯ ಸಮಯದಲ್ಲಿ ಬಸ್ ಮತ್ತು ಟ್ರಕ್ ಅಪಘಾತದಿಂದಾಗಿ 18 ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ. ಬಾಬಾ ಬೈದ್ಯನಾಥ್ ಮೃತರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ" ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.