ಬೆಂಗಳೂರು, ಜು. 30 (DaijiworldNews/AK):ಅತ್ಯಾಚಾರ ಆರೋಪ ಎದುರಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ತೀರ್ಪುನ್ನು ಜನಪ್ರತಿನಿಧಿಗಳ ಕೋರ್ಟ್ ಆಗಸ್ಟ್ 1ಕ್ಕೆ ಮೂಂದೂಡಿದೆ.

ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಗಜಾನನ ಭಟ್ ಅವರು ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದರು. ಇದೀಗ ಆಗಸ್ಟ್ 1ಕ್ಕೆ ತೀರ್ಪನ್ನು ಮುಂದೂಡಿಕೆ ಮಾಡಲಾಗಿದೆ.
ಈ ವೇಳೆ ಸರ್ಕಾರಿ ವಕೀಲ ಎನ್ ಜಗದೀಶ್ ಹಾಗೂ ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಬಳಿ ಮೊಬೈಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯಗಳ ಬಗ್ಗೆ ಸ್ಪಷ್ಟನೆಗಳನ್ನು ಕೇಳಿದರು. ಇದರೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಗ್ಗೆ ನ್ಯಾಯಾಧೀಶರು ಕೆಲ ಮಾಹಿತಿ ಕೇಳಿದರು. ಅಂತಿಮವಾಗಿ ಕೋರ್ಟ್ ಇಂದು ಮಧ್ಯಾಹ್ನದ ಒಳಗೆ ಸ್ಪಷ್ಟನೆ ನೀಡುವಂತೆ ಸರ್ಕಾರಿ ಪರ ವಕೀಲರಿಗೆ ಸೂಚಿಸಿತು.
ಮೈಸೂರಿನ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಜ್ವಲ್ ರೇವಣ್ಣ ಮೇಲಿದೆ.