ಪಾಟ್ನಾ, ಆ. 22 (DaijiworldNews/AK): ಜೈಲಿನಲ್ಲಿ ಕುಳಿತು ಯಾರು ಕೂಡ ಆದೇಶ ನೀಡುವುದು ಬೇಡ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ, ಸಿಎಂ, ಸಚಿವರನ್ನು ಪದಚ್ಯುತಿಗೊಳಿಸುವ ಮಸೂದೆ ಬಗ್ಗೆ ಬಹಿರಂಗವಾಗಿ ಮೋದಿ ಮಾತನಾಡಿದ್ದಾರೆ.

ಬಿಹಾರದಲ್ಲಿ ಪಿಎಂಎವೈ-ಗ್ರಾಮೀಣ ಅಡಿಯಲ್ಲಿ 12,000 ಗ್ರಾಮೀಣ ಫಲಾನುಭವಿಗಳು ಮತ್ತು ಪಿಎಂಎವೈ-ನಗರ ಅಡಿಯಲ್ಲಿ 4,260 ಫಲಾನುಭವಿಗಳ ಗೃಹ ಪ್ರವೇಶ ಸಮಾರಂಭದ ಭಾಗವಾಗಿ ಪ್ರಧಾನಿ ಮೋದಿ ಕೆಲವು ಫಲಾನುಭವಿಗಳಿಗೆ ಕೀಲಿಗಳನ್ನು ಸಾಂಕೇತಿಕವಾಗಿ ಹಸ್ತಾಂತರಿಸಿದ್ದಾರೆ.
ಈ ವೇಳೆ ಮಾತನಾಡಿದ ಪ್ರಧಾನಿ, ಕ್ರಿಮಿನಲ್ ಹಿನ್ನೆಲೆಯ ಜನಪ್ರತಿನಿಧಿಗಳನ್ನು ವಜಾಗೊಳಿಸುವ ಗುರಿಯನ್ನು ಮಸೂದೆಯು ಹೊಂದಿದೆ. ಪ್ರಮುಖ ಹುದ್ದೆಗಳನ್ನು ಹೊಂದಿರುವ ಜನರು ಜೈಲಿನಿಂದ ಕಾರ್ಯನಿರ್ವಹಿಸಲು ಅವಕಾಶ ನೀಡಬಾರದು ಎಂದು ತಿಳಿಸಿದ್ದಾರೆ.
ಬಂಧನಕ್ಕೆ ಒಳಗಾಗಿ 30 ದಿನ ಜೈಲಿನಲ್ಲಿದ್ದರೆ ಪ್ರಧಾನಿ, ಮುಖ್ಯಮಂತ್ರಿ, ಸಚಿವರನ್ನು ಪದಚ್ಯುತಿಗೊಳಿಸಲು ಅನುವು ಮಾಡಿಕೊಡುವ ಸಂವಿಧಾನ ತಿದ್ದುಪಡಿಯ ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ..