ನವದೆಹಲಿ, ಆ. 29 (DaijiworldNews/AA): ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭಾರತೀಯ ರಿಸರ್ವ್ ಬ್ಯಾಂಕ್ನ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ಅವರನ್ನು ನೇಮಕ ಮಾಡಲಾಗಿದೆ.

ಊರ್ಜಿತ್ ಪಟೇಲ್ ಅವರನ್ನು ಮೂರು ವರ್ಷಗಳ ಅವಧಿಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಲಾಗಿದೆ. ಅವರು 1992 ರಿಂದ ಆರ್ಬಿಐ ಗವರ್ನರ್ ಆಗಿ ಕೆಲಸ ಮಾಡಿದ್ದಾರೆ. ಇದಲ್ಲದೆ, ಅವರು ನೋಟು ಅಮಾನ್ಯೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಊರ್ಜಿತ್ ಪಟೇಲ್ ಅವರು ಸೆಪ್ಟೆಂಬರ್ 4, 2014 ರಂದು ಭಾರತೀಯ ರಿಸರ್ವ್ ಬ್ಯಾಂಕ್ ನ 24 ನೇ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಅವರು 1990 ರ ನಂತರ ತಮ್ಮ ಅಧಿಕಾರಾವಧಿ ಪೂರ್ಣಗೊಳ್ಳುವ ಮೊದಲು ರಾಜೀನಾಮೆ ನೀಡಿದ ಮೊದಲ ಕೇಂದ್ರ ಬ್ಯಾಂಕ್ ಗವರ್ನರ್ ಆಗಿದ್ದಾರೆ. ಡಿಸೆಂಬರ್ 10, 2018 ರಂದು ಅವರು ರಾಜೀನಾಮೆ ನೀಡಿದ ಒಂದು ದಿನದ ನಂತರ ಅವರ ಅಧಿಕಾರಾವಧಿ ಪೂರ್ಣಗೊಂಡಿತ್ತು.
ಇದಕ್ಕೂ ಮೊದಲು, ಅವರು ಆರ್ಬಿಐನ ಉಪ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದರು. 1996-1997ರ ಅವಧಿಯಲ್ಲಿ ಐಎಂಎಫ್ನಿಂದ ಕೇಂದ್ರ ಬ್ಯಾಂಕ್ಗೆ ನಿಯೋಜನೆಯಲ್ಲಿದ್ದರು. ಅವರು 1998 ರಿಂದ 2001 ರವರೆಗೆ ಹಣಕಾಸು ಸಚಿವಾಲಯದ (ಆರ್ಥಿಕ ವ್ಯವಹಾರಗಳ ಇಲಾಖೆ) ಸಲಹೆಗಾರರಾಗಿದ್ದರು. ಜೊತೆಗೆ ಅವರು ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ ಇತರ ಹುದ್ದೆಗಳನ್ನು ಸಹ ನಿರ್ವಹಿಸಿದ್ದಾರೆ.