ಮೈಸೂರು, ಆ. 29 (DaijiworldNews/AK): ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆಯಾಗಿರುವ ಬಾನು ಮುಷ್ತಾಕ್ ಅವರು ಕನ್ನಡಾಂಬೆ ಕುರಿತ ತಮ್ಮ ಹೇಳಿಕೆಗೆ ಸ್ಪಷ್ಟನೆ ಕೊಡಬೇಕು ಎಂದು ಯದುವೀರ್ ಒತ್ತಾಯಿಸಿದ್ದಾರೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಯನ್ನು ಮೊದಲು ಯದುವೀರ್ ಸ್ವಾಗತಿಸಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಕಾರಣ ಪಕ್ಷದ ನಿರ್ಧಾರಕ್ಕೆ ಮಣೆ ಹಾಕಿದ್ದಾರೆ. ಬಾನು ಮುಷ್ತಾಕ್ ಕನ್ನಾಡಂಬೆ ಕುರಿತ ತಮ್ಮ ಹೇಳಿಕೆಗೆ ಮೊದಲು ಸ್ಪಷ್ಟನೆಯನ್ನ ಕೊಡಲಿ ಎಂದು ಆಗ್ರಹಿಸಿದ್ದಾರೆ.
ಸ್ಪಷ್ಟೀಕರಣ ಕೊಡದಿದ್ದರೆ ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ನನ್ನ ವಿರೋಧ ಇದೆ. ಸರ್ಕಾರ ಅವರನ್ನು ಆಯ್ಕೆ ಮಾಡಿದಾಗ ನಾನು ಸ್ವಾಗತಿಸಿದ್ದೆ. ಅವರ ಹಳೇ ಭಾಷಣ ನಂತರ ನೋಡಿದ್ದೇನೆ. ಆ ಭಾಷಣಕ್ಕೆ ಸ್ಪಷ್ಟೀಕರಣ ಬೇಕು. ಸ್ಪಷ್ಟೀಕರಣ ಕೊಡಲಿ ಅಥವಾ ಹೇಳಿಕೆಯನ್ನು ವಾಪಸ್ ಪಡೆಯಲಿ. ಎರಡು ಮಾಡದಿದ್ದರೆ ನನ್ನ ವಿರೋಧ ಇದೆ ಎಂದು ಯದುವೀರ್ ಸ್ಪಷ್ಟಪಡಿಸಿದ್ದಾರೆ.