ತುಮಕೂರು, ಸೆ. 03 (DaijiworldNews/AK): ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ.

ಮಧುಗಿರಿಯ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ರಾಜಣ್ಣ, ಇದೇ ವೇಳೆ ಬಿಜೆಪಿ ಸೇರುವ ಕುರಿತು ಇದ್ದ ಆರೋಪವನ್ನು ಅಲ್ಲಗಳೆದಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮ ನನಗೆ ಬಹಳ ಪ್ರೀತಿಯ ಯೋಜನೆ. ಸಿದ್ದರಾಮಯ್ಯ ಅವರು ಅನ್ನಭಾಗ್ಯ ಕಾರ್ಯಕ್ರಮದಿಂದ ನನಗೆ ಅಚ್ಚುಮೆಚ್ಚು. ಅದಕ್ಕೆ ನಾನು ಅವರನ್ನು ಹೆಚ್ಚು ಪ್ರೀತಿ ಮಾಡುತ್ತೇನೆ. ಹಸಿವಿನ ಪಿಡುಗು ತೊಡೆದು ಹಾಕಿದ್ದು ಮಾನ್ಯ ಸಿದ್ದರಾಮಯ್ಯ ಎಂದರು.
ಉಳಿದ ಸಿಎಂಗಳಿಗೆ ಮನಸ್ಥಿತಿ ಇರಲಿಲ್ಲ. ಹಾಗಾಗಿ ಅವರು ಅನ್ನಭಾಗ್ಯದಂತಹ ಕಾರ್ಯಕ್ರಮ ತಂದಿಲ್ಲ. ಸಿದ್ದರಾಮಯ್ಯನವರು ಅವರ ಮನೆಯಿಂದ ತಂದು ಕೊಟ್ಟಿಲ್ಲ ನಿಜ. ಆದರೆ ಬೇರೆ ಸಿಎಂಗಳು ಯಾಕೆ ಕೊಟ್ಟಿಲ್ಲ ಎಂದರು.
ನಾನು ಮಾಜಿ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ನನಗೆ ಅದರಿಂದ ಬೇಜಾರಿಲ್ಲ. 35 ಸಾವಿರ ಲೀಡ್ನಿಂದ ನಾನು ಗೆದ್ದಿದ್ದೇನೆ. ಈಗ ಚುನಾವಣೆ ಆದರೂ ನಾನೂ ಹೆಚ್ಚು ಮತದಿಂದ ಗೆಲ್ಲುತ್ತೇನೆ. ನಾನು ಭ್ರಷ್ಟಾಚಾರ ಮಾಡಿಲ್ಲ. ಆದರೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟೆ ಎಂದು ಹೇಳಿದ್ದಾರೆ.