ನವದೆಹಲಿ, ಸೆ. 09 (DaijiworldNews/TA): ಉಪ ರಾಷ್ಟ್ರಪತಿ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮೊದಲಿಗೆ ಮತ ಚಲಾಯಿಸಿದರು. ಪ್ರಧಾನಿ ಮೋದಿಗೆ ಜೊತೆಗೆಯಾಗಿ ಕೇಂದ್ರ ಸಚಿವ ಕಿರಣ್ ರಿಜಿಜು, ಅರ್ಜುನ್ ರಾಮ್ ಮೇಘವಾಲ್, ಜಿತೇಂದ್ರ ಸಿಂಗ್ ಮತ್ತು ಎಲ್ ಮುರುಗನ್ ಸಂಸತ್ ಭವನದಲ್ಲಿನ ವಸುಧಾ ಕೋಣೆಯಲ್ಲಿ ಮತ ಚಲಾಯಿಸಿದರು.

ಮತ ಚಲಾವಣೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, 2025ರ ಉಪ ರಾಷ್ಟ್ರಪತಿ ಚುನಾವಣೆಗೆ ಮತದಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮತದಾನದ ಬೆನ್ನಲ್ಲೇ ಪ್ರಧಾನಿ ಮೋದಿ ಪ್ರವಾಹ ಸಂತ್ರಸ್ತ ಹಿಮಾಚಲ ಪ್ರದೇಶ ಮತ್ತು ಪಂಜಾಬ್ಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.
ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಮೇಘವಾಲ್, ಪ್ರಹ್ಲಾದ್ ಜೋಶಿ, ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಎಸ್ಪಿ ನಾಯಕ ರಾಮ್ ಗೋಪಾಲ್ ಯಾದವ್, ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ನಾಸರ್ ಹುಸೇನ್ ಕೂಡ ಮತದಾನದ ಆರಂಭದಲ್ಲೇ ತಮ್ಮ ಮತ ಚಲಾಯಿಸಿದ್ದಾರೆ.