ಬೆಂಗಳೂರು, ಸೆ. 10 (DaijiworldNews/AA): ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

"ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ" ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಸಿಎಂ ಸೂಚನೆ ಮೇರೆಗೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನು ಸಿಎಂ ಸೂಚನೆ ಬಳಿಕ ಮುಖ್ಯಕಾರ್ಯದರ್ಶಿ ನಿರಂತರವಾಗಿ ವಿದೇಶಾಂಗ ಇಲಾಖೆ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ವರದಿಯಾಗಿದೆ.