ನವದೆಹಲಿ, ಸೆ. 13 (DaijiworldNews/AA): ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಟ್ರಕ್ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಕಚೇರಿ, "ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಸಂಭವಿಸಿರುವುದು ನಿಜಕ್ಕೂ ಹೃದಯವಿದ್ರಾವಕ ಘಟನೆ. ಈ ದುರಂತದಲ್ಲಿ ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಅವರ ಬಗ್ಗೆ ಕನಿಕರವಿದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪಾರ್ಥಿಸುತ್ತೇನೆ" ಎಂದು ತಿಳಿಸಿದೆ.
ಜೊತೆಗೆ ಮೃತರ ಕುಟುಂಬಸ್ಥರಿಗಾಗಿ ಪಿಎಂಎನ್ಆರ್ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಹಣವನ್ನು ಘೋಷಿಸಲಾಗಿದೆ.