ಬೊಗೋಟಾ, ಅ. 02 (DaijiworldNews/AK): ಮೋದಿ ನೇತೃತ್ವದ ಎನ್ಡಿಎ ಆಡಳಿತದಲ್ಲಿ ಭಾರತದ ಪ್ರಜಾಪ್ರಭುತ್ವ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದೆ. ಇದು ಭಾರತಕ್ಕೆ ಅತಿದೊಡ್ಡ ಬೆದರಿಕೆಯಾಗಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ದಕ್ಷಿಣ ಅಮೆರಿಕದ ಕೊಲಂಬಿಯಾ ದೇಶದ ಇಐಎ ವಿಶ್ವವಿದ್ಯಾಲಯದಲ್ಲಿ ವಿದ್ಯಾಥಿಗಳ ಜೊತೆಗಿನ ಸಂವಾದದಲ್ಲಿ ಮಾತನಾಡಿ, ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯು ಎಲ್ಲರಿಗೂ ಒಂದು ಸ್ಥಾನವನ್ನು ಒದಗಿಸುತ್ತದೆ. ಆದರೆ ಸದ್ಯಕ್ಕೆ, ಪ್ರಜಾಪ್ರಭುತ್ವ ವ್ಯವಸ್ಥೆಯು ಎಲ್ಲ ಕಡೆಯಿಂದಲೂ ದಾಳಿಗೆ ಒಳಗಾಗಿದೆ. ಆರ್ಎಸ್ಎಸ್-ಬಿಜೆಪಿ ಸೈದ್ದಾಂತಿಕತೆಯ ಹೃದಯದಲ್ಲಿ ಹೇಡಿತನ ಇದೆ ಎಂದು ದೂರಿದರು.
ಭಾರತವು ತನ್ನ 1.4 ಶತಕೋಟಿ ಜನರೊಂದಿಗೆ ಅಗಾಧ ಸಾಮರ್ಥ್ಯವನ್ನು ಹೊಂದಿದೆ. ಆದರೆ ಭಾರತವು ಚೀನಾಕ್ಕಿಂತ ಸಂಪೂರ್ಣವಾಗಿ ವಿಭಿನ್ನವಾದ ವ್ಯವಸ್ಥೆಯನ್ನು ಹೊಂದಿದೆ. ಚೀನಾ ಬಹಳ ಕೇಂದ್ರೀಕೃತ ಮತ್ತು ಏಕರೂಪದ್ದಾಗಿದೆ. ಭಾರತವು ವಿಕೇಂದ್ರೀಕೃತವಾಗಿದ್ದು ಬಹು ಭಾಷೆಗಳು, ಸಂಸ್ಕೃತಿಗಳು, ಸಂಪ್ರದಾಯಗಳು ಮತ್ತು ಧರ್ಮಗಳನ್ನು ಹೊಂದುವ ಮೂಲಕ ಹೆಚ್ಚು ಸಂಕೀರ್ಣವಾದ ವ್ಯವಸ್ಥೆಯನ್ನು ಹೊಂದಿದೆ ಎಂದರು.