ಬೆಳಗಾವಿ, ಅ. 03 (DaijiworldNews/AA): ನವೆಂಬರ್-ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವುದು ನೂರಕ್ಕೆ ನೂರರಷ್ಟು ನಿಜ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭವಿಷ್ಯ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, "ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದ ಆಗಿರುವುದು ನಿಜ. ನವೆಬರ್, ಡಿಸೆಂಬರ್ ತಿಂಗಳಲ್ಲಿ ಕಾಂತ್ರಿ ಅಂತ ಹೇಳಿ ಒಬ್ಬರು ಸಚಿವರು ಈಗ ಮನೆಗೆ ಹೋಗಿದ್ದಾರೆ. ಒಪ್ಪಂದ ಆಗಿರೋದು ನಿಜ. ಈಗ ಜಗಳ ಆರಂಭವಾಗಿದೆ" ಎಂದು ತಿಳಿಸಿದ್ದಾರೆ.
"ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲ್ಲ, ಡಿಕೆಶಿ ಹಠ ಬಿಡ್ತಿಲ್ಲ. ಕಾಂಗ್ರೆಸ್ ಜಗಳದಲ್ಲಿ ಸರ್ಕಾರ ಪತನವಾದ್ರೆ ನಾವೇನೂ ಸರ್ಕಾರ ಮಾಡಲ್ಲ. ನಾವು ಚುನಾವಣೆಗೆ ಹೋಗಲು ಸಿದ್ಧರಿದ್ದೇವೆ" ಎಂದು ವಾಗ್ದಾಳಿ ನಡೆಸಿದ್ದಾರೆ.
"ಕಾಂಗ್ರೆಸ್ ಶಾಸಕರೇ ಅನುದಾನ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ಬೆಂಗಳೂರಿನಲ್ಲಿ ಹಳ್ಳ ಇಲ್ಲದೇ ರಸ್ತೆ ತೋರಿಸಿದ್ರೆ ಬಹುಮಾನ ಕೊಡಬಹುದು" ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಲೇವಡಿ ಮಾಡಿದ್ದಾರೆ.