ಬೆಂಗಳೂರು, ಅ. 10 (DaijiworldNews/AK): ಸತೀಶ್ ಜಾರಕಿಹೊಳಿ, ಮಹದೇವಪ್ಪ , ನಾನು ಯಾವುದೇ ಪೊಲಿಟಿಕಲ್ ಮೀಟಿಂಗ್ ಮಾಡಿಲ್ಲ ಎಂದು ಗೃಹಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಗುರುವಾರ ಮಹದೇವಪ್ಪ, ಪರಮೇಶ್ವರ್, ಸತೀಶ್ ಜಾರಕಿಹೊಳಿ ಅಪಾರ್ಟ್ಮೆಂಟ್ನಲ್ಲಿ ಸಭೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆ ಸಭೆಯಲ್ಲಿ ಯಾವುದೇ ವಿಶೇಷ ಇಲ್ಲ. ಸಭೆ ಮಾಡಿರೋದು ಮೊದಲ ಬಾರಿ ಅಲ್ಲ. ಅನೇಕ ಬಾರಿ ನಾನು ಜಾರಕಿಹೊಳಿ, ಮಹದೇವಪ್ಪ ಸಭೆ ಮಾಡಿದ್ದೇವೆ. ನಾವೆಲ್ಲ ಸ್ನೇಹಿತರು, ಕೆಲವು ವಿಷಯಗಳು ಚರ್ಚೆ ಮಾಡಬೇಕು ಅಂದಾಗ ಭೇಟಿ ಮಾಡುತ್ತೇವೆ. ಅದು ಪೊಲಿಟಿಕಲ್ ಮೀಟಿಂಗ್ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜಣ್ಣ ಮಂತ್ರಿ ಅಲ್ಲ ಅದಕ್ಕೆ ಬಂದಿರಲಿಲ್ಲ. ನಿನ್ನೆ ಕ್ಯಾಬಿನೆಟ್ ಸಭೆ ಇತ್ತು. ಕೆಲವು ವಿಷಯ ಸೂಕ್ಷ್ಮ ಇತ್ತು ಹಾಗೇ ಮಾತಾಡಿಕೊಂಡು, ತಿಂಡಿ ತಿಂದು ಹೋಗೋಣ ಅಂತ ಸಭೆ ಮಾಡಿದ್ವಿ. ಅದೊಂದು ಸಾಮಾನ್ಯ ಮೀಟಿಂಗ್ ಅಷ್ಟೇ. ಈ ಹಿಂದೆ ಬೇಕಾದಷ್ಟು ಬಾರಿ ನಾವು ಸಭೆ ಮಾಡಿದ್ದೇವೆ. ಇದೇನು ಮೊದಲ ಸಭೆ ಅಲ್ಲ. ಸತೀಶ್ ಜಾರಕಿಹೊಳಿ, ಮಹದೇವಪ್ಪ ಮನೆಯಲ್ಲಿ ಅನೇಕ ಬಾರಿ ಮೀಟ್ ಮಾಡಿದ್ದೇವೆ. ಹೊಸದೇನು ಅಲ್ಲ ಎಂದಿದ್ದಾರೆ.