ಪಾಟ್ನಾ, ಅ. 20 (DaijiworldNews/AK):ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಇಂದು ಬಿಹಾರ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮಹಾಘಟಬಂಧನ್ನಲ್ಲಿ ಸೀಟು ಹಂಚಿಕೆ ಬಿಕ್ಕಟ್ಟಿನ ನಡುವೆಯೂ 143 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಎರಡನೇ ಹಂತದ ನಾಮಪತ್ರ ಸಲ್ಲಿಕೆಯ ಕೊನೆಯ ದಿನದಂದು ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
2025ರ ಬಿಹಾರ ವಿಧಾನಸಭಾ ಚುನಾವಣೆಗೆ ಆರ್ಜೆಡಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 143 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಆರ್ಜೆಡಿ ನಾಯಕ ತೇಜಸ್ವಿ ಯಾದವ್ ವೈಶಾಲಿ ಜಿಲ್ಲೆಯ ರಾಘೋಪುರ ವಿಧಾನಸಭಾ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ. ಇಂಡಿಯ ಮೈತ್ರಿಕೂಟದೊಳಗೆ ಉದ್ವಿಗ್ನತೆ ಹೆಚ್ಚುತ್ತಿದ್ದು, ಇದೀಗ ಆರ್ಜೆಡಿ ಮತ್ತು ಕಾಂಗ್ರೆಸ್ ನಡುವೆ ಅಂತಿಮ ಸೀಟು ಹಂಚಿಕೆ ಸೂತ್ರದ ಕುರಿತು ಇನ್ನೂ ಒಮ್ಮತ ಮೂಡಿಲ್ಲ
ನವೆಂಬರ್ 6 ಮತ್ತು ನವೆಂಬರ್ 11ರಂದು ಎರಡು ಹಂತಗಳಲ್ಲಿ ಬಿಹಾರದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.