ಹೈದರಾಬಾದ್, ಅ. 26 (DaijiworldNews/TA): ಶಂಶಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್ಐ ಅಧಿಕಾರಿಗಳು ಭಾರಿ ಮೌಲ್ಯದ ಮಾದಕ ವಸ್ತುಗಳನ್ನು ಪತ್ತೆಹಚ್ಚಿದ್ದಾರೆ. ಬ್ಯಾಂಕಾಕ್ನಿಂದ ಹೈದರಾಬಾದ್ಗೆ ಆಗಮಿಸುತ್ತಿದ್ದ ಪ್ರಯಾಣಿಕನಿಂದ ಸುಮಾರು ರೂ. 4.15 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಮಾಹಿತಿಯ ಪ್ರಕಾರ, ಆ ಪ್ರಯಾಣಿಕನು ತನ್ನ ಸೂಟ್ಕೇಸ್ನ ತಳಭಾಗದಲ್ಲಿ ವಿಶೇಷ ರೀತಿಯಲ್ಲಿ ಗಾಂಜಾವನ್ನು ಅಡಗಿಸಿ ತರಲು ಪ್ರಯತ್ನಿಸಿದ್ದಾನೆ. ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಚಲನವಲನ ಗಮನಿಸಿದ ಅಧಿಕಾರಿಗಳು ಸೂಟ್ಕೇಸ್ ಪರಿಶೀಲಿಸಿದ ವೇಳೆ, ಪ್ಲಾಸ್ಟಿಕ್ ಪ್ಯಾಕೆಟ್ಗಳಲ್ಲಿ ಸೀಲ್ ಮಾಡಲಾಗಿದ್ದ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಯಿತು.
ಘಟನೆಯ ನಂತರ ಡಿಆರ್ಐ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ವಿಚಾರಣೆ ಪ್ರಾರಂಭಿಸಿದ್ದಾರೆ. ವಶಪಡಿಸಿಕೊಳ್ಳಲಾದ ಮಾದಕ ವಸ್ತುವಿನ ಮಾದರಿಗಳನ್ನು ಫೊರೆನ್ಸಿಕ್ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಯು ಅಂತಾರಾಷ್ಟ್ರೀಯ ಕಳ್ಳಸಾಗಣೆ ತಂಡದೊಂದಿಗೆ ಸಂಪರ್ಕ ಹೊಂದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.