ಮೈಸೂರು,ನ. 11 (DaijiworldNews/AK): ಚುನಾವಣೆ ವೇಳೆಯ ಬಾಂಬ್ ಬ್ಲಾಸ್ಟ್ ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ ಬಾಂಬ್ ಬ್ಲಾಸ್ಟ್ ಗಳು ಆಗುತ್ತಿವೆ ? ನೆನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆ ವೇಳೆ ಪ್ರಭಾವ ಬೀರುತ್ತದೆಯೇ ಎಂದು ಪತ್ರಕರ್ತರು ಪ್ರಶ್ನಿಸಿದರು.
ಪತ್ರಕರ್ತರ ಈ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಚುನಾವಣೆ ವೇಳೆಯ ಬಾಂಬ್ ಬ್ಲಾಸ್ಟ್ ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ. ನೆನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ಬಾಂಬ್ ಬ್ಲಾಸ್ಟ್ ಗಳು ಆಗಬಾರದು. ಅಮಾಯಕರ ಜೀವಹಾನಿ ಬೇಸರದ ಸಂಗತಿ. ಭಾರತವನ್ನು ಒಂದು ಧರ್ಮದ ದೇಶ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಭಾರತ ಸಂವಿಧಾನಬದ್ಧ ಬಹುತ್ವದ ದೇಶ ಎಂದರು.