ತಿರುವನಂತಪುರ, ನ. 28 (DaijiworldNews/AA): ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್ಕೂತಥಿಲ್ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂತ್ರಸ್ತ ಮಹಿಳೆಯೊಬ್ಬರ ಹೇಳಿಕೆ ಆಧಾರದ ಮೇಲೆ ಶುಕ್ರವಾರ ವಲಿಯಮಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿಎಂ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿದ್ದ ಮಹಿಳೆ ರಾಹುಲ್ ಮಮ್ಕೂತಥಿಲ್ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದರು. ಸಿಎಂ ಭೇಟಿ ಬಳಿಕ ಠಾಣೆಗೆ ತೆರಳಿದ ಮಹಿಳೆ ದೂರು ನೀಡಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಬಲವಂತದ ಗರ್ಭಪಾತ ಮತ್ತು ಜೀವ ಬೆದರಿಕೆ ಸಂಬಂಧವಾಗಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಾಯ್ದೆಗಳ ಅಡಿ ಶಾಸಕ ರಾಹುಲ್ ಮಮ್ಕೂತಥಿಲ್ ವಿರುದ್ಧ ಪ್ರಕರಣ ದಾಖಲಾಗಿವೆ. ಸದ್ಯ ರಾಹುಲ್ ಮಮ್ಕೂಟತಿಲ್ ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.