ಬೆಂಗಳೂರು, ಡಿ. 03 (DaijiworldNews/AA): ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 1.71 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಕಳ್ಳಸಾಗಣೆ ಮಾಡುತ್ತಿದ್ದ ಮಲೇಷ್ಯಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ಕೌಲಾಲಂಪುರದಿಂದ ಆಗಮಿಸುತ್ತಿದ್ದ ಒಬ್ಬ ಪ್ರಯಾಣಿಕನನ್ನು ತಡೆದು 1.71 ಕೋಟಿ ರೂ. ಮೌಲ್ಯದ 4.9 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಆ ಪ್ರಯಾಣಿಕನನ್ನು ಎನ್ಡಿಪಿಎಸ್ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಬೆಂಗಳೂರು ಕಸ್ಟಮ್ಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.
ಈ ಘಟನೆ ಡಿಸೆಂಬರ್ 1 ರಂದು ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ನಡೆದಿದೆ. ಇನ್ನು ಕಸ್ಟಮ್ಸ್ ಬಂಧಿತ ಪ್ರಯಾಣಿಕನ ಗುರುತನ್ನು ಬಹಿರಂಗಪಡಿಸಿಲ್ಲ.