ಪಣಜಿ, ಡಿ. 07 (DaijiworldNews/AA): ಉತ್ತರ ಗೋವಾದ ಅರ್ಪೋರಾ ನೈಟ್ಕ್ಲಬ್ ಅಗ್ನಿ ದುರಂತದಲ್ಲಿ 25 ಮಂದಿ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲಬ್ನ ಮ್ಯಾನೇಜರ್ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಕ್ಲಬ್ ಮಾಲೀಕನ ವಿರುದ್ಧವೂ ಅರೆಸ್ಟ್ ವಾರಂಟ್ ಜಾರಿಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಅರ್ಪೋರಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಅಗ್ನಿ ಸುರಕ್ಷತಾ ನಿಯಮ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಪ್ರಾಥಮಿಕ ತನಿಖೆ ವೇಳೆ ಬೆಳಕಿಗೆ ಬಂದಿದೆ. ಹೀಗಾಗಿ ಕ್ಲಬ್ನ ಮ್ಯಾನೇಜರ್ನನ್ನು ಬಂಧಿಸಲಾಗಿದ್ದು, ಮಾಲೀಕನ ವಿರುದ್ಧವೂ ವಾರಂಟ್ ಜಾರಿ ಮಾಡಲಾಗಿದೆ.
ಅರ್ಪೋರಾದ ನೈಟ್ ಕ್ಲಬ್ ಅಗ್ನಿ ಅವಘಡ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿರುವ ಸಿಎಂ ಡಾ. ಪ್ರಮೋದ್ ಸಾವಂತ್, "ಈಗಾಗಲೇ ಜನರಲ್ ಮ್ಯಾನೇಜರ್ನನ್ನ ಬಂಧಿಸಿದ್ದು, ಮಾಲೀಕನ ವಿರುದ್ಧ ಎಫ್ಐಆರ್ ದಾಖಲಿಸಿ ವಾರಂಟ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಕ್ಲಬ್ ಅಗ್ನಿ ಸುರಕ್ಷತಾ ಮಾನದಂಡಗಳನ್ನ ಪಾಲಿಸಿದೆಯೇ ಎಂಬುದನ್ನೂ ಕೂಡ ಪತ್ತೆ ಮಾಡಬೇಕಿದೆ. ಕ್ಲಬ್ ಯಾವ್ಯಾವ ಅನುಮತಿಗಳನ್ನ ಪಡೆದುಕೊಂಡಿದೆ, ಯಾರು ಅನುಮತಿ ಕೊಟ್ಟಿದ್ದಾರೆ ಎಲ್ಲವನ್ನೂ ಬಯಲಿಗೆಳೆಯಬೇಕು" ಎಂದು ನಿರ್ದೇಶಿಸಿದ್ದಾರೆ.