ಮಂಡ್ಯ, ಡಿ. 07 (DaijiworldNews/AA): ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ನಾಗತಿಹಳ್ಳಿಯಲ್ಲಿ ಸಂಭವಿಸಿದೆ.

ಚಿಕ್ಕಮಗಳೂರು ಮೂಲದ ಚನ್ನೆಗೌಡ (60), ಸರೋಜಮ್ಮ (55), ಜಯಮ್ಮ (70) ಮೃತರು.
ಮೃತರು ಚಿಕ್ಕಮಗಳೂರು ಮೂಲದವರು. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕಾರು ತೆರಳುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ತಿರುವಿನಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.