ಬೆಂಗಳೂರು, ಡಿ. 08 (DaijiworldNews/AA): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಸಹ ಕೈದಿಗಳಿಗೆ ಅವರು ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ.

ದರ್ಶನ್ ಈ ಬಾರಿ ಜೈಲು ಸೇರಿದಾಗಿನಿಂದಲೂ ಕಠಿಣ ನಿಯಮ ಜಾರಿಯಲ್ಲಿದೆ. ಅಲ್ಲದೆ, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಲ್ಲವೂ ಬದಲಾಗಿದೆ. ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ ಅತಿ ಕಠಿಣ ರೂಲ್ಸ್ ಜಾರಿಗೆ ತಂದಿದ್ದಾರೆ. ದರ್ಶನ್ ಅವರು ಸಾಲಿನಲ್ಲಿ ನಿಂತು ತಾವೇ ಊಟ ತೆಗೆದುಕೊಂಡು ಬರಬೇಕಿದೆ. ಒಳಗಿನ ಶೌಚಾಲಯ ಕೂಡ ತಾವೇ ಕ್ಲೀನ್ ಮಾಡಬೇಕಿದೆ. ಈ ನಿಯಮಗಳಿಂದ ದರ್ಶನ್ ತತ್ತರಿಸಿದ್ದಾರೆ.
ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿದ ಆರಂಭದಲ್ಲಿ ಜಾಮೀನು ಪಡೆದು ಹಾಯಾಗಿ ಹೊರಗೆ ಸುತ್ತಾಡಿಕೊಂಡಿದ್ದ ಅವರು ಸುಪ್ರೀಂಕೋರ್ಟ್ ಬೇಲ್ ರದ್ದು ಮಾಡುತ್ತಿದ್ದಂತೆ ಮರಳಿ ಜೈಲು ಸೇರಿದ್ದಾರೆ. ಇದೀಗ ಜೈಲಿನ ನಿಯಮಗಳು ಕಠಿಣವಾಗಿರುವುದರಿಂದ ದರ್ಶನ್ ತತ್ತರಿಸಿ ಹೋಗಿದ್ದಾರೆ ಎನ್ನಲಾಗುತ್ತಿದೆ.