ನವದೆಹಲಿ, ಡಿ. 08 (DaijiworldNews/TA): ಸದನದಲ್ಲಿ ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಕುರಿತು ಪ್ರಧಾನಿ ಮೋದಿ ಮಾತನಾಡಿದರು. ವಂದೇ ಮಾತರಂ ಗೀತೆಯು ಬ್ರಿಟಿಷರ ಎದುರು ಬಂಡೆಯಂತೆ ನಿಂತಿತ್ತು ಎಂದು ಹೇಳಿದರು. ಇದೀಗ ಈ ಬಗ್ಗೆ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅವರನ್ನು ಟೀಕಿಸಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಮಂತ್ರಿಯನ್ನು ಟೀಕಿಸಿ, “ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯಲು ಮಾತ್ರ ವಂದೇ ಮಾತರಂ ವಿಚಾರ ಪ್ರಸ್ತಾಪಿಸಲಾಗಿದೆ. ಅವರು ಉತ್ತಮ ಭಾಷಣಕಾರರು ಆದರೂ, ಸತ್ಯವನ್ನು ಮರೆಯಲು ಸಾಧ್ಯವಿಲ್ಲ. ನಾವು ದೇಶದ ಹಿತಕ್ಕಾಗಿ ಹೋರಾಡುತ್ತೇವೆ. ಚುನಾವಣಾ ಫಲಿತಾಂಶದಿಂದ ಯಾವದಕ್ಕೂ ನಾವು ಹಿಂಜರಿಯುವುದಿಲ್ಲ. ನಿಮ್ಮನ್ನು ನಿಲ್ಲಿಸುವುದು ಸಾಧ್ಯವಿಲ್ಲ” ಎಂದರು. ಪ್ರಧಾನಿ ಮಾತನಾಡಿದ ಸಂದೇಶ ಮತ್ತು ಪ್ರತಿಕ್ರಿಯೆಯ ನಡುವಿನ ಈ ರಾಜಕೀಯ ಬಣ್ಣವು ಈ ಚಳಿಗಾಲದ ಅಧಿವೇಶನದಲ್ಲಿ ಬಿಸಿ ಚರ್ಚೆಗೆ ಕಾರಣವಾಗಿದೆ.