ಕೋಝಿಕ್ಕೋಡ್, ಜ. 07 (DaijiworldNews/TA): ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ಇಂದು ಬೆಳಿಗ್ಗೆ ಬಾಂಬ್ ಬೆದರಿಕೆಯ ಸಂದೇಶ ಬಂದಿದ್ದು, ಪ್ರಾಂಶುಪಾಲರಿಗೆ ಇಮೇಲ್ ಮೂಲಕ ತಿಳಿಸಲಾಗಿದೆ. ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಸಂದೇಶ ಬಂದಿದ್ದು, ಸಂದೇಶದಲ್ಲಿ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಮೂರು RDX ಐಇಡಿ ಬಾಂಬ್ ಇಡಲಾಗಿದೆ ಎಂದು ಹೇಳಲಾಗಿದೆ.

ಬಾಂಬ್ ನಿಷ್ಕ್ರಿಯ ದಳ ಮತ್ತು ಸ್ಥಳೀಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತಲುಪಿದ್ದು, ವ್ಯಾಪಕ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಾಥಮಿಕ ತಪಾಸಣೆಯಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಸಿಗಲಿಲ್ಲ. ಅಧಿಕಾರಿಗಳು ಪಾರ್ಕಿಂಗ್ ಪ್ರದೇಶ ಸೇರಿದಂತೆ ಎಲ್ಲಾ ಭಾಗಗಳನ್ನು ಸಂಪೂರ್ಣವಾಗಿ ಪರಿಶೀಲಿಸುತ್ತಿದ್ದಾರೆ. ಪೋಲೀಸರು, ಸಾರ್ವಜನಿಕರಿಗೆ ಯಾವುದೇ ರೀತಿಯ ಆತಂಕ ಬೇಡ ಎಂದು ಸೂಚಿಸುತ್ತಿದ್ದು, ಒಪಿಡಿ ಎದುರು ಪರಿಶೀಲನೆ ಮುಂದುವರಿಯುತ್ತಿದೆಯೆಂದು ತಿಳಿಸಿದ್ದಾರೆ.