ಬೆಂಗಳೂರು, ಜ. 08 (DaijiworldNews/AA): ನಗರದ ಅಪಾರ್ಟ್ಮೆಂಟ್ ಕಟ್ಟಡವೊಂದರ 16ನೇ ಫ್ಲೋರ್ನಿಂದ ಬಿದ್ದು ಮಂಗಳೂರು ಮೂಲದ ಟೆಕ್ಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ಮಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ನಿಕ್ಷೇಪ್ ಬಂಗೇರ(26) ಎಂದು ಗುರುತಿಸಲಾಗಿದೆ.
ನಿಕ್ಷೇಪ್ ವಾಸವಿದ್ದ ಬಗಲಗುಂಟೆಯ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ಸಂಭವಿಸಿದೆ. ಅವರು 20ನೇ ಮಹಡಿಯ ಫ್ಲಾಟ್ನಲ್ಲಿ ವಾಸವಾಗಿದ್ದರು, ಆದರೆ ಬುಧವಾರ ಬೆಳಿಗ್ಗೆ 16ನೇ ಮಹಡಿಗೆ ಬಂದು ಅಲ್ಲಿಂದ ಕೆಳಗೆ ಜಿಗಿದಿದ್ದಾರೆ ಎಂದು ವರದಿಯಾಗಿದೆ.
ನಿಕ್ಷೇಪ್ ವರ್ಕ್ ಫ್ರಂ ಹೋಮ್ ಕೆಲಸ ಮಾಡುತ್ತಿದ್ದರು. ಅವರು ಸ್ಕಿಜೋಫ್ರೇನಿಯಾ ಖಾಯಿಲೆಯಿಂದ ಬಳಲುತ್ತಿದ್ದರು. ಈ ಸಂಬಂಧ ಬಗಲಗುಂಟೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ನಿಕ್ಷೇಪ್ ಅವರು ವಿದೇಶದಲ್ಲಿ ಇಂಜಿನಿಯರಿಂಗ್ ಶಿಕ್ಷಣ ಮುಗಿಸಿ ನಂತರ ಬೆಂಗಳೂರಿನಲ್ಲಿ ಉದ್ಯೋಗಕ್ಕೆ ಸೇರಿದ್ದರು. ನಗರಕ್ಕೆ ಬಂದಾಗಿನಿಂದ ಅವರು ಬಗಲಗುಂಟೆಯ ಅಪಾರ್ಟ್ಮೆಂಟ್ವೊಂದರಲ್ಲಿ ವಾಸವಿದ್ದರು. ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದಾಗಿ ಅವರು ಮಾನಸಿಕ ಖಿನ್ನತೆಗೆ ಜಾರಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.