ಬೆಂಗಳೂರು, ಜ. 09 (DaijiworldNews/AK): ಹುಬ್ಬಳ್ಳಿ ಮಹಿಳೆಯ ವಿವಸ್ತ್ರಗೊಳಿಸಿದ ಘಟನೆಯಿಂದ ಇಡೀ ರಾಜ್ಯದ ಮಹಿಳೆಯರು ಮುಂದೇನು ಎಂದು ಚಿಂತೆ ಮಾಡುವ ದುಸ್ಥಿತಿಗೆ ಬಂದು ತಲುಪಿದೆ. ಈಗಲಾದರೂ ಸರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಾನೂನಿನಂತೆ ಕ್ರಮ ಕೈಗೊಳ್ಳಲಿ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಒತ್ತಾಯಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿದ ಘಟನೆ ಖಂಡನೀಯ. ಇದರ ಕುರಿತು ಸಮಗ್ರ ತನಿಖೆ ಆಗಲಿ ಎಂದು ಒತ್ತಾಯಿಸಿದರು. ಘಟನೆಗೆ ಕಾರಣಕರ್ತರಿಗೆ ಶಿಕ್ಷೆ ಆಗಬೇಕು ಎಂದು ತಿಳಿಸಿದರು.