ನವದೆಹಲಿ,ಜ. 13 (DaijiworldNews/ AK): ಪಾಕಿಸ್ತಾನದೊಂದಿಗೆ ಇಂದು ಡಿಜಿಎಂಒ ಮಟ್ಟದ ಮಾತುಕತೆ ನಡೆದಿದ್ದು, ಈ ಸಂದರ್ಭದಲ್ಲಿ ಪಾಕಿಸ್ತಾನದ ಕಡೆಯಿಂದ ಬರುವ ಡ್ರೋನ್ಗಳ ಬಗ್ಗೆ ಕಳವಳ ವ್ಯಕ್ತವಾಗಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಹೇಳಿದ್ದಾರೆ.

ಭಾರತದೊಳಗೆ ಡ್ರೋನ್ ಚಟುವಟಿಕೆ ನಿಲ್ಲಿಸಲು ಪಾಕ್ಗೆ ಎಚ್ಚರಿಕೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ನೌಶೇರಾ-ರಾಜೌರಿ ವಲಯದಲ್ಲಿ ಡ್ರೋನ್ಗಳು ಪತ್ತೆಯಾದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನರಲ್ ಉಪೇಂದ್ರ ದ್ವಿವೇದಿ, ಮೇ 10ರಿಂದ ಪಶ್ಚಿಮ ಫ್ರಂಟ್, ಜಮ್ಮು ಮತ್ತು ಕಾಶ್ಮೀರ ಸೂಕ್ಷ್ಮ ಪ್ರದೇಶಗಳಾಗಿ ಉಳಿದಿವೆ. ಭದ್ರತಾ ಪಡೆಗಳು 31 ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿದ್ದರಿಂದ ಅಲ್ಲಿನ ಪರಿಸ್ಥಿತಿ ಸದ್ಯಕ್ಕೆ ನಿಯಂತ್ರಣದಲ್ಲಿದೆ. 2025ರಲ್ಲಿ ಆಪರೇಷನ್ ಮಹಾದೇವ್ನಲ್ಲಿ ಮೂವರು ಪಹಲ್ಗಾಮ್ ದಾಳಿಯ ಅಪರಾಧಿಗಳನ್ನು ತಟಸ್ಥಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದ 8 ಭಯೋತ್ಪಾದಕ ಶಿಬಿರಗಳು ಇನ್ನೂ ಸಕ್ರಿಯವಾಗಿವೆ. 6 ಎಲ್ಒಸಿಯತ್ತ ಮುಖ ಮಾಡಿವೆ ಮತ್ತು 2 ಅಂತಾರಾಷ್ಟ್ರೀಯ ಗಡಿಯಲ್ಲಿವೆ. ಪಾಕಿಸ್ತಾನಿ ಪಡೆಗಳು ಒಳಗೆ ನುಸುಳಲು ಪ್ರಯತ್ನಿಸಿದರೆ, ಅದರ ಆಧಾರದ ಮೇಲೆ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಹೇಳಿದ್ದಾರೆ.