ಬೆಂಗಳೂರು,ಮಾ. 06 (DaijiworldNews/AK): 2026ನೇ ಸಾಲಿನ ಕರ್ನಾಟಕ ಬಜೆಟ್ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹಲವು ಹೊಸ ಯೋಜನೆಗಳನ್ನು ನೀಡಿದೆ. ಬೋಧಕ ಸಿಬ್ಬಂದಿಯ ಕೊರತೆ ನೀಗಿಸಲು ಸರ್ಕಾರಿ ಕಾಲೇಜುಗಳಲ್ಲಿ 2,000 ಹುದ್ದೆಗಳನ್ನು ಹಾಗೂ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಘೋಷಿಸಲಾಗಿದೆ.

ಎಡಿಬಿ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಅಡಿಯಲ್ಲಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಉತ್ತೇಜಿಸಲು ಒಂಬತ್ತು ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
ಬೋಧಕ ಸಿಬ್ಬಂದಿಯ ಕೊರತೆ ನೀಗಿಸಲು ಸರ್ಕಾರಿ ಕಾಲೇಜುಗಳಲ್ಲಿ 15000ಹುದ್ದೆಗಳನ್ನು ಹಾಗೂ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ 90 ದಿನಗಳ ಮಾತೃತ್ವ ರಜೆ ಸೌಲಭ್ಯ ಒದಗಿಸಲಾಗುವುದು. ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ 25 ಸರ್ಕಾರಿ ಪದವಿ ಕಾಲೇಜುಗಳು, 3 ಪಾಲಿಟೆಕ್ನಿಕ್ ಮತ್ತು 3 ಇಂಜಿನಿಯರಿಂಗ್ ಕಾಲೇಜುಗಳಲ್ಲಿ 31 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಒದಗಿಸಲಾಗುವುದು. ರಾಜ್ಯದಾದ್ಯಂತ ಹೊಸ ಕಾಲೇಜುಗಳ ಸ್ಥಾಪನೆ ಮತ್ತು ತಾಂತ್ರಿಕ ಕೋರ್ಸ್ಗಳಾದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಮಷಿನ್ ಲರ್ನಿಂಗ್ ಅನ್ನು ಪರಿಚಯಿಸುವ ಮೂಲಕ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಗುರಿಯನ್ನು ಬಜೆಟ್ ಹೊಂದಿದೆ.