ಬೆಂಗಳೂರು, ಮಾ. 12 (DaijiworldNews/TA): ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು, ಅಡುಗೆ ಅನಿಲ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಈ ವಿಚಾರವಾಗಿ ಬಾಯಿ ಬಿಡುತ್ತಿಲ್ಲ. ಹಳ್ಳಿಜನರು, ರೈತರು ಹಾಗೂ ಹೊಟೇಲ್ಗಳಿಗೆ ಸೌದೆ ಒಲೆ ಬಳಸಲು, ಕಟ್ಟಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ.
ಈ ಇಂಧನ ಬೆಲೆ ಏರಿಕೆಯಿಂದ ಜನ ಪರದಾಡುತ್ತಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಕೇಂದ್ರ ಸರ್ಕಾರ ಇದಕ್ಕೆ ಹೊಣೆ. ಕೇಂದ್ರ ಸರ್ಕಾರ ವಿದೇಶಾಂಗ ನೀತಿ ಬಗ್ಗೆ ಸ್ಪಷ್ಟವಾಗಿ ಮಾತನಾಡುತ್ತಿಲ್ಲ. ಈ ವಿಚಾರದಲ್ಲಿ ಕೇಂದ್ರದ ಧೋರಣೆ ಖಂಡನೀಯ. ನಾಗರಿಕರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು ಎಮದು ಹೇಳಿದರು.