ಉತ್ತರ ಪ್ರದೇಶ, ಮಾ. 28 (DaijiworldNews/AA): ಯುಪಿಎಸ್ಸಿ ಪರೀಕ್ಷೆಯನ್ನು ಐಎಎಸ್, ಐಪಿಎಸ್ ಮತ್ತು ಐಎಫ್ಎಸ್ ನಂತಹ ಉನ್ನತ ಸರ್ಕಾರಿ ಸೇವೆಗಳಿಗೆ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ನಡೆಸಲಾಗುತ್ತದೆ. 2025 ನೇ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ 9ನೇ ರ್ಯಾಂಕ್ ಪಡೆದ ಆಸ್ಥಾ ಜೈನ್ ಅವರ ಯಶೋಗಾಥೆ ಇದು.

ಆಸ್ಥಾ ಜೈನ್ ಅವರು ಉತ್ತರ ಪ್ರದೇಶದ ಶಮ್ಲಿಯ ಕಾಂಡ್ಲಾ ಗ್ರಾಮದವರು. ಕಿರಣ ಅಂಗಡಿ ಮಾಲೀಕರ ಮಗಳಾದ ಅವರು, ದೆಹಲಿ ವಿಶ್ವವಿದ್ಯಾಲಯದ ಮಿರಾಂಡಾ ಹೌಸ್ನಿಂದ ಬಿಎ ಪದವಿ ಪೂರ್ಣಗೊಳಿಸಿದ್ದಾರೆ.
ಪದವಿ ಪಡೆದ ಬಳಿಕ ಆಸ್ಥಾ ಜೈನ್ ಅವರು ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸಲು ಪ್ರಾರಂಭಿಸಿದರು. ಅವರು ರಾಜ್ಯಶಾಸ್ತ್ರ ಮತ್ತು ಅಂತರರಾಷ್ಟ್ರೀಯ ಸಂಬಂಧವನ್ನು ತಮ್ಮ ಐಚ್ಛಿಕ ವಿಷಯವನ್ನಾಗಿ ಆಯ್ಕೆ ಮಾಡಿಕೊಂಡರು.
2023 ರಲ್ಲಿ ಮೊದಲ ಬಾರಿಗೆ ಯುಪಿಎಸ್ಸಿ ಪರೀಕ್ಷೆ ಬರೆದ ಆಸ್ಥಾ ಜೈನ್ 131 ರ್ಯಾಂಕ್ ಗಳಿಸಿದರು. ಬಳಿಕ 2024 ರಲ್ಲಿ ಎರಡನೇ ಬಾರಿಗೆ ಯುಪಿಎಸ್ಸಿ ಪರೀಕ್ಷೆ ಬರೆದ ಅವರು 186 ರ್ಯಾಂಕ್ ಪಡೆದರು. ಇನ್ನು 2025 ರಲ್ಲಿ ಮೂರನೇ ಬಾರಿಗೆ ಯುಪಿಎಸ್ಸಿ ಪರೀಕ್ಷೆ ಬರೆದ ಅವರು 9 ನೇ ಅಖಿಲ ಭಾರತ ರ್ಯಾಂಕ್ ಪಡೆದು ಉತ್ತೀರ್ಣರಾಗುವಲ್ಲಿ ಯಶಸ್ವಿಯಾಗುತ್ತಾರೆ.
ಮೂರನೇ ಬಾರಿಗೆ ಯುಪಿಎಸ್ಸಿ ಪರೀಕ್ಷೆ ಬರೆಯುವ ಮೊದಲು ಆಸ್ಥಾ ಅವರು ಐಪಿಎಸ್ ಅಧಿಕಾರಿಯಾಗಿ ಆಯ್ಕೆಯಾಗಿ ಹೈದರಾಬಾದ್ನಲ್ಲಿ ತರಬೇತಿ ಪಡೆಯುತ್ತಿದ್ದರು. ತರಬೇತಿ ನಡುವೆಯೇ ಐಎಎಸ್ ಗುರಿಗಾಗಿ ಓದಿ ಮೂರನೇ ಬಾರಿಗೆ ಯುಪಿಎಸ್ಸಿ ಪರೀಕ್ಷೆದು 9 ನೇ ರ್ಯಾಂಕ್ ಗಳಿಸುವ ಮೂಲಕ ತಮ್ಮ ಐಎಎಸ್ ಅಧಿಕಾರಿಯಾಗುವ ಕನಸನ್ನ ನನಸಾಗಿಸಿಕೊಂಡಿದ್ದಾರೆ.