ಚೆನ್ನೈ, ಮಾ. 30 (DaijiworldNews/AA): ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಿಎಂ ಎಂ.ಕೆ ಸ್ಟಾಲಿನ್ ಮತ್ತು ಪ್ರತಿಸ್ಪರ್ಧಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥರಾದ ವಿಜಯ್ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಹಾಲಿ ಸರ್ಕಾರದ ಅವಧಿ ಮೇ 10 ರಂದು ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಎ ಏಪ್ರಿಲ್ 23 ರಂದು ಒಂದೇ ಹಂತದಲ್ಲಿ 234 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯ ಫಲಿತಾಂಶ ಮೇ 4 ರಂದು ಪ್ರಕಟವಾಗಲಿದೆ.
ಸಿಎಂ ಎಂ.ಕೆ ಸ್ಟಾಲಿನ್ ಅವರು ಈ ಹಿಂದೆ ಮೂರು ಬಾರಿ ಗೆಲುವು ಸಾಧಿಸಿದ ಕೊಲತ್ತೂರ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಇನ್ನೂ ನಟ ವಿಜಯ್ ಚೆನ್ನೈನ ನಗರ ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಪೂರ್ವ ಕ್ಷೇತ್ರಗಳಿಂದ ಕಣಕ್ಕಿಳಿದಿದ್ದಾರೆ.
ಡಿಎಂಕೆ ರಾಜ್ಯದ 234 ಕ್ಷೇತ್ರಗಳಲ್ಲಿ 164 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಇನ್ನು ಉಳಿದ 70 ಸ್ಥಾನಗಳನ್ನು ಅದರ ಮೈತ್ರಿ ಪಾಲುದಾರರಿಗೆ ಹಂಚಿಕೆ ಮಾಡಿದೆ.