ಬಾಗಲಕೋಟೆ,ಏ. 01 (DaijiworldNews/AK): ಪ್ರಾಮಾಣಿಕವಾಗಿ, ಬದ್ಧತೆಯಿಂದ, ಪಕ್ಷ ಸಂಘಟನೆ ಮತ್ತು ಪ್ರಚಾರ ಕಾರ್ಯಗಳಲ್ಲಿ ಶ್ರಮಿಸುತ್ತಿರುವ ನಮ್ಮ ಕಾರ್ಯಕರ್ತರ ನಿಷ್ಠಾವಂತ ಹಾಗೂ ಸಮರ್ಪಣಾ ಮನೋಭಾವವೇ ನಮ್ಮ ಅತಿದೊಡ್ಡ ಶಕ್ತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಬಾಗಲಕೋಟೆ ಉಪಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಪಕ್ಷದ ವಿಸ್ತಾರಕರೊಂದಿಗೆ ಇಂದು ಸಭೆ ನಡೆಸಿ, ಚುನಾವಣಾ ಕಾರ್ಯತಂತ್ರಗಳ ಕುರಿತು ಅವರು ಸಮಾಲೋಚನೆ ಕೈಗೊಂಡರು. ಆಡಳಿತ ಪಕ್ಷದ ಅಧಿಕಾರ ಬಲ, ಧನ ಬಲಗಳ ಸವಾಲನ್ನು ಸಮರ್ಪಕವಾಗಿ ಎದುರಿಸಿ, ಜನಬಲವೇ ಅಂತಿಮ ಎಂಬುದನ್ನು ಸಾಬೀತುಪಡಿಸಲು ಅವರು ಮನವಿ ಮಾಡಿದರು.
ಸಭೆಯಲ್ಲಿ ಬಾಗಲಕೋಟೆ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್, ಸಂಸದ ನಾರಾಯಣ ಸಾ ಭಾಂಡಗೆ, ಶಾಸಕರಾದ ಪಿ.ಹೆಚ್.ಪೂಜಾರ್, ಜಗದೀಶ್ ಗುಡಗಂಟಿ, ಶೈಲೇಂದ್ರ ಬೆಲ್ದಾಳೆ, ದುರ್ಯೋಧನ ಐಹೊಳೆ, ಹನುಮಂತ ನಿರಾಣಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಹಾಲಪ್ಪ ಆಚಾರ್, ಮಾಜಿ ಸಂಸದ ಪ್ರತಾಪ್ ಸಿಂಹ, ಬೆಳಗಾವಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಹುಬ್ಬಳ್ಳಿ ಧಾರವಾಡ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಿಗೆ, ಕೊಪ್ಪಳ ಜಿಲ್ಲಾಧ್ಯಕ್ಷ ನವೀನ್ ಗುಲಗಣ್ಣವರ್, ಬಿಜಾಪುರ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ವಿಸ್ತಾರಕರು, ಅನೇಕ ಪ್ರಮುಖ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.