ಬೆಂಗಳೂರು, ಏ. 13 (DaijiworldNews/AK): ಬಾಸ್ಕೆಟ್ಬಾಲ್ ಪಂದ್ಯಾವಳಿಯಲ್ಲಿ 17 ಬಾರಿ ಕರ್ನಾಟಕವನ್ನು ಪ್ರತಿನಿಧಿಸಿ ಇದೀಗ ಮಿಸ್ ಯೂನಿವರ್ಸ್ ಕರ್ನಾಟಕ – 2026 ಕಿರೀಟವನ್ನು ತಮ್ಮದಾಗಿಸಿಕೊಂಡಿರುವ ಕುಮಾರಿ ಲೇಖನ ಮಲ್ಲಿಕಾರ್ಜುನ ಹೆಗ್ಡೆ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಲೇಖನ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.