ನವದೆಹಲಿ, ಏ. 14 (DaijiworldNews/AK): ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಗೊಂಡ ನಂತರ 9 ಕಾರ್ಮಿಕರು ಸಾವು 15 ಜನರು ಗಾಯಗೊಂಡಿದ್ದಾರೆ.

ಇಂದು ಮಧ್ಯಾಹ್ನ ಸಿಂಗಿತರೈ ಗ್ರಾಮದಲ್ಲಿರುವ ವೇದಾಂತ ಲಿಮಿಟೆಡ್ ವಿದ್ಯುತ್ ಸ್ಥಾವರದಲ್ಲಿನ ಬಾಯ್ಲರ್ ಟ್ಯೂಬ್ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಶಕ್ತಿ ಪೊಲೀಸ್ ಅಧೀಕ್ಷಕ ಪ್ರಫುಲ್ ಠಾಕೂರ್ ಹೇಳಿದ್ದಾರೆ.
ಸುಮಾರು 30ರಿಂದ 40 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ಅವರನ್ನು ತಕ್ಷಣದ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಸ್ಫೋಟದ ನಿಖರವಾದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ಗಾಯಾಳುಗಳನ್ನು ರಾಯಗಢದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸುದ್ದಿ ತಿಳಿದ ಕೂಡಲೇ, ತುರ್ತು ಪ್ರತಿಕ್ರಿಯೆ ತಂಡಗಳು ಮತ್ತು ಸ್ಥಳೀಯ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.