ಶ್ರೀನಗರ, ಏ. 20 (DaijiworldNews/AA): ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 15 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಸಂಭವಿಸಿದೆ.

ರಾಮನಗರದಿಂದ ಉಧಂಪುರಕ್ಕೆ ತೆರಳುತ್ತಿದ್ದ ಬಸ್, ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದೆ. ಘಟನಾ ಸ್ಥಳದಲ್ಲಿ ಸೇನೆ, ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆನಡೆಸದ್ದು, ಗಂಭೀರವಾಗಿ ಗಾಯಗೊಂಡವರನ್ನು ವಿಮಾನದಲ್ಲಿ ಸಾಗಿಸುವ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸಹಾಯವನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.