ಕೋಲ್ಕತ್ತಾ, ಮೇ. 01 (DaijiworldNews/AA): ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್ ಮತ್ತು ಮಗ್ರಹತ್ ಪಶ್ಚಿಮ್ ಕ್ಷೇತ್ರಗಳಲ್ಲಿ ಅಕ್ರಮ ನಡೆದಿದೆ ಎಂದು ದೂರುಗಳು ಬಂದ ಹಿನ್ನೆಲೆ 15 ಮತಗಟ್ಟೆಗಳಲ್ಲಿ ಮೇ 2ರಂದು ಮರು ಮತದಾನ ನಡೆಸುವುದಾಗಿ ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.

ಮಗ್ರಹತ್ ಪಶ್ಚಿಮ್ನ 11 ಮತಗಟ್ಟೆಗಳಲ್ಲಿ ಮತ್ತು ಡೈಮಂಡ್ ಹಾರ್ಬರ್ನ 4 ಮತಗಟ್ಟೆಗಳಲ್ಲಿ ಮೇ 2ರಂದು ಮರು ಮತದಾನ ನಡೆಯಲಿದೆ. ಎಲ್ಲಾ 15 ಮತಗಟ್ಟೆಗಳಲ್ಲಿ ಮತದಾನ ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗಿ ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು ಏಪ್ರಿಲ್ 29 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಆದರೆ ಏಪ್ರಿಲ್ 29 ರಂದು ನಡೆದ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅನೇಕ ದೂರುಗಳ ಬಂದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಾದ್ಯಂತ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಭಾರತೀಯ ಚುನಾವಣಾ ಆಯೋಗ ಆದೇಶಿಸಿದೆ.