ನವದೆಹಲಿ, ಮೇ. 02 (DaijiworldNews/AA): ಭಾರತೀಯ ರಿಸರ್ವ್ ಬ್ಯಾಂಕಿನ (ಆರ್ಬಿಐ) ಹೊಸ ಉಪ ಗವರ್ನರ್ ಆಗಿ 3 ವರ್ಷಗಳ ಅವಧಿಗೆ ಕೇಂದ್ರ ಸರ್ಕಾರವು ರೋಹಿತ್ ಜೈನ್ ಅವರನ್ನು ನೇಮಕ ಮಾಡಿದೆ.

ರೋಹಿತ್ ಜೈನ್ ಅವರ ನೇಮಕಾತಿಯನ್ನು ಕ್ಯಾಬಿನೆಟ್ನ ನೇಮಕಾತಿ ಸಮಿತಿಯು ಅನುಮೋದಿಸಿದೆ. ಅವರು ಮೇ 3ರಂದು ಅಥವಾ ನಂತರ ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿದೆ.
ಆರ್ಬಿಐ ಉಪ ಗವರ್ನರ್ ಆಗಿದ್ದ ಟಿ. ರವಿಶಂಕರ್ ಅವರ ಅಧಿಕಾರಾವಧಿ ಮುಗಿದಿದೆ. ಈ ಹಿನ್ನೆಲೆ ಅವರ ಸ್ಥಾನಕ್ಕೆ ರೋಹಿತ್ ಜೈನ್ ಅವರನ್ನು ನೇಮಕ ಮಾಡಲಾಗಿದೆ.
ರೋಹಿತ್ ಜೈನ್ ಸುಮಾರು ಮೂರು ದಶಕಗಳ ಅನುಭವವನ್ನು ಹೊಂದಿದ್ದಾರೆ. ಅವರು ರಿಸರ್ವ್ ಬ್ಯಾಂಕಿನಲ್ಲಿ ಮೇಲ್ವಿಚಾರಣೆ, ಮಾನವ ಸಂಪನ್ಮೂಲ ನಿರ್ವಹಣೆ, ಬ್ಯಾಂಕಿಂಗ್ ಮತ್ತು ಇತರ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಇದಕ್ಕೂ ಮೊದಲು ರೋಹಿತ್ ಜೈನ್ ಅವರನ್ನು ಡಿಸೆಂಬರ್ 2020ರಲ್ಲಿ ಆರ್ಬಿಐನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕ ಮಾಡಲಾಗಿತ್ತು. ರೋಹಿತ್ ಜೈನ್ ವಾಣಿಜ್ಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ವ್ಯವಹಾರ ಆಡಳಿತದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿದ್ದಾರೆ.