ಕೋಲ್ಕತ್ತಾ, ಮೇ. 02 (DaijiworldNews/AA): ಪಶ್ಚಿಮ ಬಂಗಾಳದ ಫಾಲ್ಟಾ ವಿಧಾನಸಭಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಭಾರತೀಯ ಚುನಾವಣಾ ಆಯೋಗ ಶನಿವಾರ ಆದೇಶ ಹೊರಡಿಸಿದೆ.

ಬಂಗಾಳದಲ್ಲಿ 2ನೇ ಹಂತದ ಮತದಾನದ ವೇಳೆ ಇವಿಎಂ ಯಂತ್ರಗಳಲ್ಲಿ ಅಕ್ರಮ ಅಥವಾ ತಿರುಚುವಿಕೆ ಕಂಡುಬಂದ ಹಿನ್ನೆಲೆ 285 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಆದೇಶಿಸಲಾಗಿದೆ.
ಮೇ 21 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಫಾಲ್ಟಾ ಕ್ಷೇತ್ರದ 285 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸಲಾಗುವುದು. ಮೇ 24 ರಂದು ಫಲಿತಾಂಶ ಹೊರಬೀಳಲಿದೆ ಎಂದು ಆಯೋಗ ಮಾಹಿತಿ ನೀಡಿದೆ.