ಬೆಂಗಳೂರು, ಮೇ. 03 (DaijiworldNews/AK):ರಾಜ್ಯದ ಹಲವಡೆ ಇಂದಿನಿಂದ (ಮೇ 3) ಮೇ 9 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
img src=https://daijiworld.ap-south-1.linodeobjects.com/Linode/img_tv247/03-05-2026AKRAIN.jpg>
ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆ ಬೀಳಲಿದೆ.
ಬಾಗಲಕೋಟೆ, ಗದಗ, ಹಾವೇರಿ, ವಿಜಯಪುರ ಬೆಳಗಾವಿ, ಬೀದರ್, ಧಾರವಾಡ, ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಎರಡು ದಿನ ಒಣ ಹವೆ ಇರಲಿದೆ. ಮೇ 5 ರಿಂದ ಕೊಪ್ಪಳ, ಯಾದಗಿರಿ, ರಾಯಚೂರು, ಕಲಬುರಗಿ, ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ