ದಾವಣಗೆರೆ, ಮೇ. 04 (DaijiworldNews/AA): ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ ಗೆಲುವು ಸಾಧಿಸಿದ್ದಾರೆ.

ಜಿದ್ದಾಜಿದ್ದಿನಿಂದ ಕೂಡಿದ್ದ ಫಲಿತಾಂಶದಲ್ಲಿ ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಜಯಗಳಿಸಿದ್ದಾರೆ. ಇವರ ವಿರುದ್ಧ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಸೋಲನುಭವಿಸಿದ್ದಾರೆ.
ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ. 9ರಂದು ಉಪಚುನಾವಣೆ ನಡೆದಿತ್ತು. 2,31,072 ಒಟ್ಟು ಮತದಾರರಿದ್ದು, 1,58,131 (68.43%) ಮತ ಚಲಾವಣೆ ನಡೆದಿತ್ತು.