ತಿರುವನಂತಪುರಂ, ಮೇ. 04 (DaijiworldNews/AA): ಕೇರಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಹಂತ ತಲುಪಿದ್ದು, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್(ಯುಡಿಎಫ್) ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ.

ಯುಡಿಎಫ್ ಮುನ್ನಡೆ ಸಾಧಿಸುವ ಮೂಲಕ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ ಆಡಳಿತ ಅಂತ್ಯಗೊಂಡು 10 ವರ್ಷದ ಬಳಿಕ ಮತ್ತೆ ಯುಡಿಎಫ್ ಅಧಿಕಾರಕ್ಕೇರುವ ಸಾಧ್ಯತೆ ಇದೆ. ಒಟ್ಟು 140 ವಿಧಾನಸಭಾ ಕ್ಷೇತ್ರಗಳ ಪೈಕಿ ಯುಡಿಎಫ್ ಸುಮಾರು 104 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ, ಸ್ಪಷ್ಟ ಬಹುಮತ ಸಾಧಿಸಿದೆ.