ತಿರುವನಂತಪುರಂ, ಮೇ. 04 (DaijiworldNews/AA): ಈ ಬಾರಿಯ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಇತಿಹಾಸ ನಿರ್ಮಿಸಿದೆ.

ಇದೇ ಮೊದಲ ಬಾರಿಗೆ ಬಿಜೆಪಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕೇರಳದ ಬಿಜೆಪಿ ರಾಜ್ಯಾಧ್ಯಕ್ಷರಾದ ರಾಜೀವ್ ಚಂದ್ರಶೇಖರ್ ನೇಮಮ್ ಕ್ಷೇತ್ರದಲ್ಲಿ ಬಿ. ಬಿ. ಗೋಪಕುಮಾರ್ ಚಾತನ್ನೂರಿನಲ್ಲಿ ಜಯಗಳಿಸಿದ್ದಾರೆ. ಮಾಜಿ ಕೇಂದ್ರ ಸಚಿವ ಮುರಳೀಧರನ್ ಅವರು ಕಲಕುಟ್ಟಂದಿಂದ ವಿಜಯ ಸಾಧಿಸಿದ್ದಾರೆ.
ಇದು ಕೇರಳದ ರಾಜಕೀಯ ಇತಿಹಾಸದಲ್ಲಿ ಬಿಜೆಪಿಯ ಅತ್ಯಂತ ಯಶಸ್ವಿ ವಿಧಾನಸಭಾ ಚುನಾವಣೆಯಾಗಿದೆ. ಕೇರಳದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ತಳಮಟ್ಟದಿಂದ ಬಹಳ ಪ್ರಯತ್ನ ಪಡುತ್ತಿದೆ. 2016ರಲ್ಲಿ ಓ. ರಾಜಗೋಪಾಲ್ ಅವರು ನೇಮಮ್ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಬಿಜೆಪಿ ಮೊದಲ ಬಾರಿಗೆ ಕೇರಳ ವಿಧಾನಸಭೆ ಪ್ರವೇಶಿಸಿತ್ತು. ಆದರೆ 2021ರ ಚುನಾವಣೆಯಲ್ಲಿ ಪಕ್ಷವು ಯಾವುದೇ ಸ್ಥಾನ ಗೆಲ್ಲಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಬಿಜೆಪಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.