ಚೆನ್ನೈ,ಮೇ. 05 (DaijiworldNews/AK): ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ ಬಹುಮತದ ಕೊರತೆಯಿದ್ದರೂ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ ಎಂದು ವರದಿಗಳು ತಿಳಿಸಿವೆ.

ತಮಿಳುನಾಡಿನ ರಾಜಕೀಯದಲ್ಲಿ ಈಧಿಘ ದಳಪತಿ ವಿಜಯ್ ದರ್ಬಾರ್. ಚೊಚ್ಚಲ ಚುನಾವಣೆಯಲ್ಲೇ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದ್ರೆ ಬಹುಮತಕ್ಕೆ 118 ಸ್ಥಾನಗಳು ಬೇಕಿದ್ದು, 10 ಸ್ಥಾನಗಳ ಕೊರತೆಯಿದೆ. ಹೀಗಿದ್ದರೂ ಟಿವಿಕೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ ಎಂದು ವರದಿಯಾಗಿದೆ. . ಹೀಗಾಗಿ ಮೈತ್ರಿ ಕುರಿತ ಚರ್ಚೆಗಳು ಜೋರಾಗಿ ನಡೆಯುತ್ತಿದೆ.
ಟಿವಿಕೆ ಮುಖ್ಯಸ್ಥ ವಿಜಯ್, ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಪತ್ರ ಬರೆದು ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲರನ್ನು ಆಹ್ವಾನಿಸುವಂತೆ ರಾಜಭವನಕ್ಕೆ ಮನವಿ ಮಾಡಿದ್ದಾರೆ. ಜೊತೆಗೆ 2 ವಾರಗಳಲ್ಲಿ ಬಹುಮತ ಸಾಬೀತುಪಡಿಸುವುದಾಗಿ ಹೇಳಿದ್ದಾರೆ.
ಮೂಲಗಳ ಪ್ರಕಾರ, ಇಮೇಲ್ ಮೂಲಕ ರಾಜಭವನಕ್ಕೆ ಪತ್ರ ಕಳುಹಿಸಲಾಗಿದೆ. ಎರಡು ವಾರಗಳಲ್ಲಿ ಪಕ್ಷವು ತನ್ನ ಬಹುಮತ ಸಾಬೀತುಪಡಿಸುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಮಾತುಕತೆ ನಡೆಸಲು ಎಲ್ಲ ವಿಜೇತ ಅಭ್ಯರ್ಥಿಗಳನ್ನು ಟಿವಿಕೆ ಪಕ್ಷದ ಕಚೇರಿಗೆ ವಿಜಯ್ ಆಹ್ವಾನಿಸಿದ್ದಾರೆ.