ಕೋಲ್ಕತ್ತಾ, ಮೇ. 05 (DaijiworldNews/AA): ಪಶ್ಚಿಮ ಬಂಗಾಳದ 294 ವಿಧಾನಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 206 ಸ್ಥಾನಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಇದೀಗ ಅಧಿಕೃತವಾಗಿ ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ಮೊದಲ ಬಿಜೆಪಿ ಸರ್ಕಾರದ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಕುರಿತು ಮಾಧ್ಯಮವೊಂದಕ್ಕೆ ಮಾಹಿತಿ ನೀಡಿರುವ ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು, ಮೇ 9ರಂದು ರವೀಂದ್ರನಾಥ ಠ್ಯಾಗೋರ್ ಅವರ ಜನ್ಮದಿನವಿದ್ದು, ಅಂದೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಲು ನಿರ್ಧರಿಸಿದೆ. ಪ್ರಮಾಣ ವಚನ ಸಮಾರಂಭಕ್ಕೆ ಎನ್ಡಿಎ ಆಡಳಿತವಿರುವ ಎಲ್ಲ ರಾಜ್ಯಗಳ ಸಿಎಂಗಳಿಗೆ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.
ಆಡಳಿತಾರೂಢ ಟಿಎಂಸಿ ಪಕ್ಷವು ಚುನಾವಣೆಯಲ್ಲಿ ಕೇವಲ 81 ಸ್ಥಾನಗಳಿಸುವಲ್ಲಿ ಶಕ್ತö್ಯವಾಯಿತು. ಈ ಮೂಲಕ 15 ವರ್ಷಗಳ ಮಮತಾ ಬ್ಯಾನರ್ಜಿ ಅವರ ಆಡಳಿತಕ್ಕೆ ತೆರೆ ಬಿದ್ದಿದ್ದು, ಇದೇ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಸರ್ಕಾರ ರಚಿಸಲಿದೆ.