ಚೆನ್ನೈ, ಮೇ. 05 (DaijiworldNews/AK):ವಿಧಾನಸಭಾ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಎಂ.ಕೆ. ಸ್ಟಾಲಿನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆಯನ್ನು ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅಂಗೀಕರಿಸಿದ್ದಾರೆ. ಡಿಎಂಕೆ ಪಕ್ಷದ ಸೋಲಿನ ನಂತರ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗೆ ಈ ಕ್ರಮವು ಔಪಚಾರಿಕವಾಗಿ ದಾರಿ ಮಾಡಿಕೊಟ್ಟಿದೆ.
ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಸ್ಟಾಲಿನ್ ಅವರು ಮಂಗಳವಾರ ಮಧ್ಯಾಹ್ನ ತಮ್ಮ ಕ್ಷೇತ್ರವಾದ ಕೊಳತ್ತೂರಿಗೆ ಭೇಟಿ ನೀಡಲಿದ್ದಾರೆ.
ಇದೇ ವೇಳೆ, ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಿರುವ ಡಿಎಂಕೆ, ಸಾರ್ವಜನಿಕರೊಂದಿಗೆ ಸಂಪರ್ಕವನ್ನು ಮುಂದುವರಿಸುವುದರ ಜೊತೆಗೆ ವಿಧಾನಸಭೆಯಲ್ಲಿ ರಚನಾತ್ಮಕ ವಿರೋಧ ಪಕ್ಷದ ಪಾತ್ರ ವಹಿಸುವುದಾಗಿ ತಿಳಿಸಿದೆ.