ಬೆಂಗಳೂರು,ಮೇ. 05 (DaijiworldNews/AK): ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸುಮಾರು 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಕೋಲಾರ, ಬೆಳಗಾವಿ, ಧಾರವಾಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.