ಚಂಡೀಗಢ, ಮೇ. 09 (DaijiworldNews/AK):ಪಂಜಾಬ್ ಇಂಧನ ಸಚಿವ ಸಂಜೀವ್ ಅರೋರಾ ಅವರನ್ನು ಇ.ಡಿ ಬಂಧಿಸಿದೆ.

ಅರೋರಾ ಮತ್ತು ಇತರ ಕೆಲವು ಸಚಿವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಶನಿವಾರ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿದೆ. ಈ ಕ್ರಮವನ್ನು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತೀವ್ರವಾಗಿ ಖಂಡಿಸಿದ್ದಾರೆ.
62 ವರ್ಷದ ಅರೋರಾ, ಲುಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರದ ಎಎಪಿ ಶಾಸಕ. ಅರೋರಾ ಮತ್ತು ಅವರ ಸಂಸ್ಥೆಗಳಿಗೆ ಸಂಬಂಧಿಸಿದ ನಾಲ್ಕು ಸ್ಥಳಗಳಲ್ಲಿ ಹಣ ವರ್ಗಾವಣೆ ತಡೆ ಕಾಯ್ದೆ (PMLA), 2002 ರ ಅಡಿಯಲ್ಲಿ ದಾಳಿ ನಡೆಸಿತು.
ಚಂಡೀಗಢ ಮತ್ತು ದೆಹಲಿ-NCR ಪ್ರದೇಶದಲ್ಲಿ ದಾಳಿ ನಡೆಸಲಾಯಿತು. ಸಚಿವರನ್ನು ಚಂಡೀಗಢದ ಸೆಕ್ಟರ್ 2 ನಲ್ಲಿರುವ ಅವರ ಅಧಿಕೃತ ನಿವಾಸದಿಂದ ಬಂಧಿಸಲಾಯಿತು.
ಈ ವರ್ಷ ಅರೋರಾ ಮೇಲೆ ದಾಳಿ ನಡೆಯುತ್ತಿರುವುದು ಇದು ಮೂರನೇ ಬಾರಿಯಾಗಿದೆ. ಈ ತಿಂಗಳ ಆರಂಭದಲ್ಲಿ ಮತ್ತು ಏಪ್ರಿಲ್ನಲ್ಲಿ ಅವರ ವಿರುದ್ಧ ಇದೇ ರೀತಿಯ ಕ್ರಮ ಕೈಗೊಳ್ಳಲಾಗಿದೆ.