ಬೆಂಗಳೂರು, ಮೇ. 10 (DaijiworldNews/TA): ಪ್ರಧಾನಿ ನರೇಂದ್ರ ಮೋದಿ ಅವರು ಮೂರು ರಾಜ್ಯಗಳ ಚುನಾವಣಾ ಗೆಲುವಿನ ಬಳಿಕ ಇಂದು ಕರ್ನಾಟಕಕ್ಕೆ ಭೇಟಿ ನೀಡಿದರು. ಬೆಂಗಳೂರಿನ ಎಚ್ಎಎಲ್ ಆವರಣದಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರು ಪ್ರಧಾನಿಗೆ ಅದ್ಧೂರಿ ಸ್ವಾಗತ ಹಾಗೂ ಸನ್ಮಾನ ನೆರವೇರಿಸಿದರು.

13 ಕೆಜಿ ಬೆಳ್ಳಿ ಪ್ರತಿಮೆ ನೀಡಿ ಸನ್ಮಾನ : ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರಿಗೆ 13 ಕೆಜಿ ತೂಕದ ಬೆಳ್ಳಿ ಪ್ರತಿಮೆಯನ್ನು ನೀಡಿ ಗೌರವಿಸಲಾಯಿತು. ಜೊತೆಗೆ ಮೈಸೂರು ಪೇಟ ಹಾಗೂ ಶಾಲು ಹೊದಿಸಿ ವಿಶೇಷ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೋದಿ ಪರ ಘೋಷಣೆ ಕೂಗಿ ಸಂಭ್ರಮಿಸಿದರು.
ಬಿಜೆಪಿ ನಾಯಕರ ಭರ್ಜರಿ ಉಪಸ್ಥಿತಿ : ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವಿ.ಸೋಮನ್ನ, ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.
ಇದರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಅಶ್ವಥ್ ನಾರಾಯಣ ಮತ್ತು ಎಸ್. ಆರ್. ವಿಶ್ವನಾಥ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಚುನಾವಣಾ ಗೆಲುವಿನ ಸಂಭ್ರಮ : ಮೂರು ರಾಜ್ಯಗಳ ಚುನಾವಣಾ ಯಶಸ್ಸಿನ ಬೆನ್ನಲ್ಲೇ ನಡೆದ ಈ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ವಿಜಯೋತ್ಸವದ ಸಂಭ್ರಮಾಚರಣೆ ನಡೆಸಿದರು. ಪ್ರಧಾನಿ ಮೋದಿ ಭಾಷಣದ ವೇಳೆ ಬಿಜೆಪಿ ಸಾಧನೆಗಳು ಹಾಗೂ ಮುಂದಿನ ರಾಜಕೀಯ ಗುರಿಗಳ ಬಗ್ಗೆ ಚರ್ಚೆ ನಡೆಸಿದರು.