ಕೋಲ್ಕತ್ತಾ, ಮೇ. 10 (DaijiworldNews/AA): ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ ಪಕ್ಷ ವಿರೋಧಿ ಹೇಳಿಕೆ ನೀಡಿದ ತೃಣಮೂಲ ಕಾಂಗ್ರೆಸ್ನ ಮೂವರು ವಕ್ತಾರರನ್ನು 6 ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ.

ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದ ಮೇಲೆ ವಕ್ತಾರರಾದ ಕೊಹಿನೂರ್ ಮಜುಂದಾರ್, ರಿಜು ದತ್ತ ಮತ್ತು ಕಾರ್ತಿಕ್ ಘೋಷ್ ಅವರನ್ನು ಅಮಾನತುಗೊಳಿಸಲಾಗಿದೆ ಅಮಾನತು ಮಾಡಲಾಗಿದೆ.
ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ, ನಾಯಕತ್ವ ಮತ್ತು ಪಕ್ಷದ ಚುನಾವಣಾ ಕಾರ್ಯತಂತ್ರವನ್ನು ಟೀಕಿಸಿದ ಐವರು ವಕ್ತಾರರಿಗೆ ಪಕ್ಷವು ಶೋಕಾಸ್ ನೋಟಿಸ್ ನೀಡಿತ್ತು. ಅದಾದ ಕೆಲವು ದಿನಗಳ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.
ಪಕ್ಷದ ಶಿಸ್ತು ಸಮಿತಿಯ ಸದಸ್ಯರೂ ಆಗಿರುವ ಟಿಎಂಸಿ ಸಂಸದ ಡೆರೆಕ್ ಒ'ಬ್ರೇನ್ ಅವರು ನೋಟಿಸ್ಗಳನ್ನು ಜಾರಿ ಮಾಡಿದ್ದಾರೆ. ಅಮಾನತುಗೊಂಡ ಮೂವರು ನಾಯಕರಲ್ಲದೆ, ಕೃಷ್ಣೇಂದು ಚೌಧರಿ ಮತ್ತು ಪಪಿಯಾ ಘೋಷ್ ಅವರಿಗೂ ನೋಟಿಸ್ ನೀಡಲಾಗಿದೆ.