ಚೆನ್ನೈ, ಮೇ. 10 (DaijiworldNews/AA): ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಅವರು ತಿರುಚ್ಚಿ ಪೂರ್ವ ಕ್ಷೇತ್ರದಿಂದ ತಮಿಳುನಾಡು ವಿಧಾನಸಭೆಗೆ ಆಯ್ಕೆಯಾದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ತಮಿಳುನಾಡಿನ 13 ನೇ ಮುಖ್ಯಮಂತ್ರಿಯಾಗಿ ಇಂದು ಬೆಳಗ್ಗೆ ವಿಜಯ್ ಪ್ರಮಾಣ ವಚನ ಸ್ವೀಕರಿಸಿದರು. ಅವರು ಪೆರಂಬೂರು ಸ್ಥಾನವನ್ನು ಉಳಿಸಿಕೊಂಡು ಮತ್ತು ತಿರುಚ್ಚಿ ಪೂರ್ವವನ್ನು ಬಿಟ್ಟುಕೊಡಲು ನಿರ್ಧರಿಸಿರುವುದಾಗಿ ಮಾಹಿತಿ ನೀಡಿದ್ದಾರೆ.
ಚೆನ್ನೈನ ಜವಾಹರಲಾಲ್ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಐತಿಹಾಸಿಕ ಫೋರ್ಟ್ ಸೇಂಟ್ ಜಾರ್ಜ್ ಸಂಕೀರ್ಣದಲ್ಲಿರುವ ಸಚಿವಾಲಯದಲ್ಲಿ ಅಧಿಕಾರ ವಹಿಸಿಕೊಂಡರು. ಇನ್ನು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ವಿಜಯ್ 200 ಯೂನಿಟ್ ಉಚಿತ ವಿದ್ಯುತ್ ಹಾಗೂ ಮಹಿಳೆಯರಿಗೆ ವಿಶೇಷ ಕಾರ್ಯಪಡೆ ರಚಿಸುವುದಾಗಿ ಗ್ಯಾರಂಟಿ ಘೋಷಣೆ ಮಾಡಿದ್ದಾರೆ.