ಮುಂಬೈ, ಮೇ. 11 (DaijiworldNews/AA): ಒಂದು ವರ್ಷದವರೆಗೆ ಚಿನ್ನ ಖರೀದಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕರೆ ನೀಡಿದ ಬೆನ್ನಲ್ಲೇ ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ನಲ್ಲಿ ಚಿನ್ನದ ದರದಲ್ಲಿ ಗಣನೀಯ ಕುಸಿತ ಕಂಡುಬಂದಿದೆ.

ಬೆಳಗ್ಗೆ 9:40ರ ವೇಳೆಗೆ ಜೂನ್ ತಿಂಗಳ ಚಿನ್ನದ ಫ್ಯೂಚರ್ ಕಾಂಟ್ರಾಕ್ಟ್ 574 ರೂ. (0.38%) ರೂ. ಇಳಿಕೆಯಾಗಿದೆ 1,53,669 ರೂ.ನಲ್ಲಿ ವ್ಯವಹಾರ ನಡೆಸುತ್ತಿದೆ. ಆದರೆ ಬೆಳ್ಳಿಯ ದರ ಏರಿಕೆಯಾಗಿದೆ. ಜೂನ್ ಫ್ಯೂಚರ್ 698 ರೂ. (0.26%) ಏರಿಕೆಯಾಗಿದ್ದು 2,65,957 ರೂ.ನಲ್ಲಿ ವ್ಯವಹಾರ ನಡೆಸುತ್ತಿದೆ. ಈ ದರ ಇಂದು ಸಂಜೆ ಮಾರುಕಟ್ಟೆ ಕೊನೆಯಾಗುವ 3:30ರ ವೇಳೆಗೆ ಮತ್ತಷ್ಟು ಏರಿಳಿತ ಕಾಣುವ ಸಾಧ್ಯತೆಯಿದೆ.
ಕಚ್ಚಾ ತೈಲ ಮತ್ತು ಚಿನ್ನದ ಬೆಲೆಗಳು ಗಣನೀಯವಾಗಿ ಹೆಚ್ಚಾಗಿರುವುದರಿಂದ, ವಿದೇಶಿ ವಿನಿಮಯವನ್ನು ಉಳಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ, ನಾಗರಿಕರು ಮುಂದಿನ ಒಂದು ವರ್ಷದವರೆಗೆ ಚಿನ್ನ ಖರೀದಿಸುವುದನ್ನು ನಿಲ್ಲಿಸಬೇಕು ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದರು.