ಬೆಂಗಳೂರು, ಮೇ. 11 (DaijiworldNews/AK): ರಾಜ್ಯ ಸರಕಾರಿ ನೌಕರರ ತುಟ್ಟಿಭತ್ಯೆ ದರಗಳನ್ನು ಪ್ರಸಕ್ತ ಮೂಲ ವೇತನದ ಶೇ.14.25 ರಿಂದ ಶೇ.15.75ಕ್ಕೆ ಪರಿಷ್ಕರಿಸಿ ಸರಕಾರ ಆದೇಶ ಹೊರಡಿಸಿದೆ.

2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರಕಾರಿ ನೌಕರರಿಗೆ ಪ್ರಸಕ್ತ ಸಾಲಿನ ಜ.1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ. 2026 ಜನವರಿ 1ರಿಂದ ಜಾರಿಗೆ ಬರುವಂತೆ ಅನ್ವಯ ಮಾಡಲಾಗಿದೆ. ಪ್ರಸ್ತುತ ಮೂಲ ವೇತನದ ಶೇಕಡಾ 14.25 ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇಕಡಾ 15.75 ಕ್ಕೆ ಪರಿಷ್ಕರಿಸಲಾಗಿದೆ. ಅಂದರೆ ಒಟ್ಟು ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವಾದಂತಾಗಿದ್ದು,2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಇದು ಅನ್ವಯವಾಗಲಿದೆ.
ರಾಜ್ಯ ಸರ್ಕಾರವು ವೇತನದಾರರು,ಕುಟುಂಬ ನಿವೃತ್ತು ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾದದರಿಗೂ ಸಹ 2026ರ ಜನವರಿ 1ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ಕುಟುಂಬ ವೇತನದ ಪ್ರಸಕ್ತ ಶೇ.14ರಿಂದ ಶೇ. 15.75ಕ್ಕೆ ಹೆಚ್ಚಿಸಲಾಗಿದೆ.